ಫ್ಯಾಕ್ಟ್‌ಚೆಕ್‌: ಅಲ್ಪಸಂಖ್ಯಾತರನ್ನು ತೃಪ್ತಿಪಡಿಸಲು ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮಧ್ಯಾಹ್ನ ನಿಗದಿಪಡಿಸಿದ್ದಾರಾ?

ಅಲ್ಪಸಂಖ್ಯಾತರನ್ನು ತೃಪ್ತಿಪಡಿಸಲು ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮಧ್ಯಾಹ್ನ ನಿಗದಿಪಡಿಸಿದ್ದಾರಾ?

Update: 2024-02-23 00:30 GMT

ಕರ್ನಾಟಕದಲ್ಲಿ ನಡೆಯಲಿರುವ 10ನೇ ತರಗತಿಯ ಪರೀಕ್ಷೆಗಳು ನಮಾಜ್ ಸಮಯಕ್ಕೂ ಮುನ್ನ ನಿಗದಿ ಪಡಿಸಲಾಗಿದೆ. ಅಲ್ಪಸಂಖ್ಯಾತರನ್ನು ಓಲೈಸುವ ಉದ್ದೇಶದಿಂದ ರಾಜ್ಯ ಸರ್ಕಾರ ವೇಳಾಪಟ್ಟಿಯನ್ನು ಬದಲಾಯಿಸಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಫ್ಯಾಕ್ಟ್‌ಚೆಕ್‌

ವೈರಲ್‌ ಆದ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ.

ಮಾಧ್ಯಮ ವರದಿಗಳ ಪ್ರಕಾರ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಫೆಬ್ರವರಿ 2 ರಂದು ಕರ್ನಾಟಕದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಿಪರೇಟರಿ ಪರೀಕ್ಷೆ 2024 ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಫೆಬ್ರವರಿ 26 ರಿಂದ ಮಾರ್ಚ್ 2 ರವರೆಗೆ ಎರಡು ಪಾಳಿಯಲ್ಲಿ ಅಂದರೆ ಬೆಳಿಗ್ಗೆ 10.15 ರಿಂದ ಮಧ್ಯಾಹ್ನ 1.15 ರವರೆಗೆ ಮತ್ತು ಸಂಜೆ ಅವಧಿಯ ಪರೀಕ್ಷೆಯು ಮಧ್ಯಾಹ್ನ 2 ರಿಂದ 5.15 ರವರೆಗೆ ನಡೆಯಲಿದೆ.

ಕೆಎಸ್‌ಇಎಬಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಕುರಿತು ಮಾಹಿತಿಯನ್ನು ಹುಡುಕಿದಾಗ ನಮಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ನಡೆಯಲಿರುವ ಪೂರ್ವಸಿದ್ಧತಾ ಪರೀಕ್ಷೆ ದಿನದಂದು PUC ಪರೀಕ್ಷೆಯೂ ಇರುವುದರಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಮಾರ್ಚ್ 1, 2024 ರಂದು ಮಧ್ಯಾಹ್ನಕ್ಕೆ ನಿಗದಿಪಡಿಸಲಾಗಿದೆ ಎಂದು ವೆಬ್‌ಸೈಟ್‌ನಲ್ಲಿ ಸೂಚನೆಯನ್ನು ಬಿಡುಗಡೆ ಮಾಡಿದ್ದರು.




ಪರೀಕ್ಷಾ ಕೇಂದ್ರಗಳ ಕೊರತೆಯಿಂದ ವಿದ್ಯಾರ್ಥಿಗಳಲ್ಲಿ ಗೊಂದಲ ಉಂಟಾಗುವುದನ್ನು ತಪ್ಪಿಸಲು ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮಾರ್ಚ್ 1 ರಂದು ಮಧ್ಯಾಹ್ನ ನಡೆಸಬೇಕಾಯಿತು ಎಂದು ಕರ್ನಾಟಕ ಕಾಂಗ್ರೆಸ್ ಸರ್ಕಾರ ತನ್ನ ಅಧಿಕೃತ ಸಾಮಾಜಿಕ ಖಾತೆಯಲ್ಲಿ ಸ್ಪಷ್ಟಪಡಿಸಿದೆ.

ಹೀಗಾಗಿ ವೈರಲ್‌ ಆದ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ. ಅಲ್ಪಸಂಖ್ಯಾತರನ್ನು ತೃಪ್ತಿಪಡಿಸಲು ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮಧ್ಯಾಹ್ನಕ್ಕೆ ಮುಂದೂಡಲಿಲ್ಲ. ಪರೀಕ್ಷಾ ಕೇಂದ್ರಗಳ ಕೊರತೆಯಿಂದಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮಾರ್ಚ್ 1 ರಂದು ಮಧ್ಯಾಹ್ನ ನಡೆಸಲಾಗುತ್ತಿದೆ

Claim :  A timetable circulating on social media claims that the upcoming Class 10 Secondary School Leaving Certificate (SSLC) exams in Karnataka are scheduled differently on a Friday to accommodate namaz timings, accusing the state government of minority appeasement.
Claimed By :  Social Media Users
Fact Check :  False
Tags:    

Similar News