ಫ್ಯಾಕ್ಟ್ಚೆಕ್: ಅಮೇರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ ಎಂಬ ಸುದ್ದಿಯಲ್ಲಿ ಸತ್ಯಾಂಶವಿಲ್ಲ
ಅಮೇರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ ಎಂಬ ಸುದ್ದಿಯಲ್ಲಿ ಸತ್ಯಾಂಶವಿಲ್ಲ
Claim :
ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಆಹ್ವಾನದ ಮೇರೆಗೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಅಮೇರಿಕಾಗೆ ಹೊರಟಿರುವ ಡಿಕೆ ಶಿವಕುಮಾರ್.Fact :
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ವೈಯುಕ್ತಿಕ ಕೆಲಸಗಳ ನಿಮಿತ್ತ ಅಮೇರಿಕಾದ ವಾಷಿಂಗ್ಟನ್ ನಗರಕ್ಕೆ ಪ್ರವಾಸ ಕೈಗೊಂಡಿದ್ದಾರೆಯೇ ಹೊರತು ಯಾವುದೇ ರಾಜಕೀಯ ಕಾರಣಗಳಿಗಲ್ಲ.
ಅಮೇರಿಕಾದಲ್ಲಿ ಅಧ್ಯಕ್ಷೀಯ ಚುನಾವಣೆಗೆ ಕೇವಲ ಕೆಲವೇ ದಿನಗಳು ಬಾಕಿ ಇದೆ. ಈ ಸ್ಥಾನಕ್ಕಾಗಿ ಕಮಲಾ ಹ್ಯಾರಿಸ್ ಹಾಗೂ ಡೊನಾಲ್ಡ್ ಟ್ರಂಪ್ರ ನಡುವೆ ಮುಖಾಮುಖಿ ನಡೆಯುತ್ತಿದೆ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಆಹ್ವಾನದ ಮೇರೆಗೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಪ್ರಯಾಣಿಸಲಿದ್ದಾರೆ ಎಂಬ ಸುದ್ದಿ ಕೆಲವು ಸಾಮಾಜಿಕ ಮಾಧ್ಯಮಗಳಲ್ಲಿ ವರದಿಯಾಗಿದೆ.
ಸೆಪ್ಟಂಬರ್ 8,2024ರಂದು ಈಟಿವಿ ಭಾರತ್ ಕನ್ನಡ ವೆಬ್ಸೈಟ್ನಲ್ಲಿ "ಏಳು ದಿನ ಡಿಸಿಎಂ ಡಿ.ಕೆ.ಶಿವಕುಮಾರ್ ಅಮೆರಿಕ ಪ್ರವಾಸ; ಕಮಲಾ ಹ್ಯಾರಿಸ್ ಕಾರ್ಯಕ್ರಮದಲ್ಲಿ ಭಾಗಿ" ಎಂಬ ಶೀರ್ಷಿಕೆಯೊಂದಿಗೆ ವರದಿ ಮಾಡಿತುವುದನ್ನು ನಾವು ನೋಡಬಹುದು.
ಪ್ರಸನ್ನ ಕುಮಾರ್ ಐಯ್ಯಂಗಾರ್ ಎಂಬ ಫೇಸ್ಬುಕ್ ಖಾತೆದಾರ ತನ್ನ ಫೇಸ್ಬುಕ್ ಖಾತೆಯಲ್ಲಿ "Kamala Harris has invited Karnataka Deputy CM & senior Congress leader DK Shivkumar to USA to meet her and ring-leader Obama. Pappu is already in USA. Acting PM of Bangladesh Md Yunus, is also an Obama School product. It seems the Deep State is accelerating its attempts to overthrow the Modi govt. Their agents sitting in India have already met multiple anti Modi/India elements in past few weeks" ಎಂಬ ಕ್ಯಾಪ್ಷನ್ ನೀಡಿ ಆರ್ ಮಾಧ್ಯಮ ಸಂಸ್ಥೆಯ ವರದಿಯ ಸ್ಕ್ರೀನ್ಶಾಟ್ನ್ನು ಹಂಚಿಕೊಂಡಿದ್ದಾರೆ.
ವೈರಲ್ ಆದ ಕ್ಯಾಪ್ಷನ್ನ್ನು ಕನ್ನಡಕ್ಕೆ ಅನುವಾದಿಸಿದಾಗ "ಕಮಲಾ ಹ್ಯಾರಿಸ್ ಕರ್ನಾಟಕದ ಉಪಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕರಾದ ಡಿಕೆ ಶಿವಕುಮಾರ್ ಅವರನ್ನು ರಿಂಗ್-ಲೀಡರ್ ಒಬಾಮಾ ಅವರನ್ನು ಭೇಟಿ ಮಾಡಲು ಆಹ್ವಾನಿಸಿದ್ದಾರೆ. ಪಪ್ಪು ಈಗಾಗಲೇ ಅಮೇರಿಕಾದಲ್ಲಿದ್ದಾರೆ. ಬಾಂಗ್ಲಾದೇಶದ ನಿಯೋಜಿತ ಪ್ರಧಾನಿ ಎಂ.ಡಿ ಯೂನಸ್ ಕೂಡ ಒಬಾಮಾ ಶಾಲೆಯ ಉತ್ಪನ್ನ. ಇವರೆಲ್ಲ ಮೋದಿ ಸರ್ಕಾರವನ್ನು ಉರುಳಿಸಲು ಪ್ರಯತ್ನಗಳನ್ನು ವೇಗಗೊಳಿಸಿರುವಂತೆ ಕಾಣುತ್ತದೆ. ಭಾರತದಲ್ಲಿ ಕುಳಿತಿರುವ ಅವರ ಏಜೆಂಟ್ಗಳು ಕಳೆದ ಕೆಲವು ವಾರಗಳಲ್ಲಿ ಈಗಾಗಲೇ ಹಲವು ಮೋದಿ/ಭಾರತ ವಿರೋಧಿಗಳನ್ನು ಭೇಟಿಯಾಗಿದ್ದಾರೆ” ಎಂದು ಪೋಸ್ಟ್ ಮಾಡಿದ್ದಾರೆ.
Kamala Harris has invited Karnataka Deputy CM & senior Congress leader DK Shivkumar to USA to meet her and ring-leader Obama. Pappu is already in USA.
— Mr Sinha (@MrSinha_) September 8, 2024
Acting PM of Bangladesh Md Yunus, is also an Obama School product.
It seems the Deep State is accelerating its attempts to… pic.twitter.com/567ZjkUkfw
ಸೆಪ್ಟಂಬರ್ 8, 2024ರಂದು ಪ್ರತಿಧ್ವನಿ, ವಿಜಯ ಕರ್ನಾಟಕ, ನ್ಯೂಸ್18, ಟಿವಿ9 ಕನ್ನಡ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳು ಈ ಸುದ್ದಿಯನ್ನು ಪ್ರಕಟಿಸಿರುವುದನ್ನು ನಾವು ಕಂಡುಕೊಂಡೆವು
ಫ್ಯಾಕ್ಟ್ಚೆಕ್
ವೈರಲ್ ಆದ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ. ಖುದ್ದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ವೈಯುಕ್ತಿಕ ಕೆಲಸಗಳ ನಿಮಿತ್ತ ಅಮೇರಿಕಾದ ವಾಷಿಂಗ್ಟನ್ ನಗರಕ್ಕೆ ಪ್ರವಾಸ ಕೈಗೊಂಡಿದ್ದಾರೆಯೇ ಹೊರತು ಯಾವುದೇ ರಾಜಕೀಯ ಕಾರಣಗಳಿಗಲ್ಲ ಎಂದು ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಸ್ಪಷ್ಟನೆಯನ್ನು ಕೊಟ್ಟಿದ್ದಾರೆ.
ನಾವು ವೈರಲ್ ಸುದ್ದಿಯ ಬಗ್ಗೆ ಸತ್ಯಾಂಶವನ್ನು ತಿಳಿಯಲು ಕೆಲವು ಪ್ರಮುಖ ಕೀಫ್ರೇಮ್ಗಳನ್ನು ಬಳಸಿ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ಡಿಕೆ ಶಿವಕುಮಾರ್ರವರ ಎಕ್ಸ್ ಖಾತೆಯಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸಿರುವ ಸುದ್ದಿಯ ಕುರಿತು ಅವರು ಸ್ಪಷ್ಟನೆ ನೀಡಿರುವ ಪೋಸ್ಟ್ವೊಂದು ಕಂಡುಬಂದಿತು.
ನಾನು ಕೈಗೊಳ್ಳುತ್ತಿರುವ ಅಮೆರಿಕ ಪ್ರವಾಸಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ವದಂತಿಗಳ ಬಗ್ಗೆ ನನ್ನ ಸ್ಪಷ್ಟನೆ ಇದು. ಈ ಪ್ರವಾಸವು ವೈಯಕ್ತಿಕವಾಗಿದ್ದು, ಯಾವುದೇ ರಾಜಕೀಯ ಉದ್ದೇಶವನ್ನು ಹೊಂದಿಲ್ಲ. ಅಥವಾ ನನಗೆ ಯಾವುದೇ ರಾಜಕೀಯ ಆಹ್ವಾನಗಳೂ ಬಂದಿಲ್ಲ. ಸಾರ್ವಜನಿಕರು ಯಾವುದೇ ರೀತಿಯ ಊಹಾಪೋಹಗಳಿಗೆ ಕಿವಿಗೊಡದಂತೆ ವಿನಂತಿಸುತ್ತೇನೆ. ಎಂದು ತನ್ನ ಅಧಿಕೃತ ಖಾತೆಯಲ್ಲಿ ಸ್ಪಷ್ಟನೆ ಕೊಟ್ಟಿದ್ದಾರೆ.
ನಾನು ಕೈಗೊಳ್ಳುತ್ತಿರುವ ಅಮೆರಿಕ ಪ್ರವಾಸಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ವದಂತಿಗಳ ಬಗ್ಗೆ ನನ್ನ ಸ್ಪಷ್ಟನೆ ಇದು. ಈ ಪ್ರವಾಸವು ವೈಯಕ್ತಿಕವಾಗಿದ್ದು, ಯಾವುದೇ ರಾಜಕೀಯ ಉದ್ದೇಶವನ್ನು ಹೊಂದಿಲ್ಲ. ಅಥವಾ ನನಗೆ ಯಾವುದೇ ರಾಜಕೀಯ ಆಹ್ವಾನಗಳೂ ಬಂದಿಲ್ಲ.
— DK Shivakumar (@DKShivakumar) September 8, 2024
ಸಾರ್ವಜನಿಕರು ಯಾವುದೇ ರೀತಿಯ ಊಹಾಪೋಹಗಳಿಗೆ ಕಿವಿಗೊಡದಂತೆ ವಿನಂತಿಸುತ್ತೇನೆ.
ಇದೇ ಮಾಹಿತಿಯನ್ನು ಸೆಪ್ಟಂಬರ್, 8ರಂದು ಕರ್ನಾಟಕ ಕಾಂಗ್ರೆಸ್ ಎಂಬ ಎಕ್ಸ್ ಖಾತೆಯಲ್ಲಿ ಸ್ಪಷ್ಟನೆ ನೀಡಿತ್ತು. ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ವೈಯಕ್ತಿಕ ಕೆಲಸಗಳ ನಿಮಿತ್ತ ಅಮೇರಿಕಾದ ವಾಷಿಂಗ್ಟನ್ ನಗರಕ್ಕೆ ಪ್ರವಾಸ ಕೈಗೊಂಡಿದ್ದಾರೆಯೇ ಹೊರತು ಯಾವುದೇ ರಾಜಕೀಯ ಕಾರಣಗಳಿಗಲ್ಲ. ಕೆಲ ಮಾಧ್ಯಮಗಳಲ್ಲಿ ಉಹಾಪೋಹದ ವರದಿಗಳು ಪ್ರಸಾರವಾಗುತ್ತಿದ್ದು, ಆ ವರದಿಗಳು ಸತ್ಯಕ್ಕೆ ದೂರವಾಗಿದೆ" ಎಂದು ಪೋಸ್ಟ್ ಮಾಡಿರುವುದನ್ನು ನಾವು ನೋಡಬಹುದು.
ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ @DKShivakumar ಅವರು ವಯಕ್ತಿಕ ಕೆಲಸಗಳ ನಿಮಿತ್ತ ಅಮೇರಿಕಾದ ವಾಷಿಂಗ್ಟನ್ ನಗರಕ್ಕೆ ಪ್ರವಾಸ ಕೈಗೊಂಡಿದ್ದಾರೆಯೇ ಹೊರತು ಯಾವುದೇ ರಾಜಕೀಯ ಕಾರಣಗಳಿಗಲ್ಲ.
— Karnataka Congress (@INCKarnataka) September 8, 2024
ಕೆಲ ಮಾಧ್ಯಮಗಳಲ್ಲಿ ಉಹಾಪೋಹದ ವರದಿಗಳು ಪ್ರಸಾರವಾಗುತ್ತಿದ್ದು, ಆ ವರದಿಗಳು ಸತ್ಯಕ್ಕೆ ದೂರವಾಗಿದೆ. pic.twitter.com/P7mNARkAuy
ಹೀಗಾಗಿ ವೈರಲ್ ಆದ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲವೆಂದು ಸಾಭೀತಾಗಿದೆ, ಖುದ್ದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ವೈಯುಕ್ತಿಕ ಕೆಲಸಗಳ ನಿಮಿತ್ತ ಅಮೇರಿಕಾದ ವಾಷಿಂಗ್ಟನ್ ನಗರಕ್ಕೆ ಪ್ರವಾಸ ಕೈಗೊಂಡಿದ್ದಾರೆಯೇ ಹೊರತು ಯಾವುದೇ ರಾಜಕೀಯ ಕಾರಣಗಳಿಗಲ್ಲ ಎಂದು ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಸ್ಪಷ್ಟನೆಯನ್ನು ಕೊಟ್ಟಿದ್ದಾರೆ.