ಫ್ಯಾಕ್ಟ್ಚೆಕ್: ಇಂದೋರ್ನಲ್ಲಿ ನಡೆದ ಕಾರು ಅಪಘಾತದಲ್ಲಿ ಯಾವುದೇ ಕೋಮು ಕೋನವಿಲ್ಲ
ಇಂದೋರ್ನಲ್ಲಿ ನಡೆದ ಕಾರು ಅಪಘಾತದಲ್ಲಿ ಯಾವುದೇ ಕೋಮು ಕೋನವಿಲ್ಲ
Claim :
ಕಾರು ಅಪಘಾತ ಮಾಡುವ ಮೂಲಕ ಹಿಂದೂ ಹೆಣ್ಣು ಮಕ್ಕಳನ್ನು ಜಿಹಾದಿಗಳು ಕೊಲ್ಲುತ್ತಿದ್ದಾರೆFact :
ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಹಿಂದೂ. ಈ ಘಟನೆಯಲ್ಲಿ ಯಾವುದೇ ಕೋಮು ಕೋನವಿಲ್ಲ
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ವಿಡಿಯೋವನ್ನು ನೋಡಿದರೆ, ಮನೆಯ ಮುಂದೆ ಇಬ್ಬರು ಹೆಣ್ಣು ಮಕ್ಕಳು ರಂಗೋಲಿ ಹಾಕುತ್ತಿರುವಾಗ, ಕಪ್ಪು ಬಣ್ಣದ ಕಾರೊಂದು ವೇಗವಾಗಿ ಬಂದು ಅವರ ಮೇಲೆ ಹತ್ತಿಸುವುದನ್ನು ನೋಡಬಹುದು. ಈ ವಿಡಿಯೋವನ್ನು ಸಾಕಷ್ಟು ಸಾಮಾಜಿಕ ಬಳಕೆದಾರರು ತಮ್ಮ ಖಾತೆಯಲ್ಲಿ ಹಂಚಿಕೊಂಡು ಹಿಂದೂ ಸಮುದಾಯದ ಹೆಣ್ಣು ಮಕ್ಕಳನ್ನು ಯೋಜನೆಯನ್ನು ರೂಪಿಸಿ ಜಿಹಾದಿಗಳು ಕೊಲ್ಲುತ್ತಿದ್ದಾರೆ ಎಂದು ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ.
ಅಕ್ಟೋಬರ್ 29, 2024ರಂದು ʼSAFTVʼ ಎಂಬ ಯೂಟ್ಯೂಬ್ ಚಾನೆಲ್ನಲ್ಲಿ "ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರ ಮೇಲೆ ಕಾರು ಚಲಾಯಿಸಿದ ಅಪ್ರಾಪ್ತ ಬಾಲಕ" ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋವಿಗೆ ಕ್ಯಾಪ್ಷನ್ ಅಗಿ ʼಮಧ್ಯಪ್ರದೇಶದ ಇಂದೋರ್ಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮನೆಯ ಹೊರಗೆ ರಂಗೋಲಿ ಹಾಕುತ್ತಿದ್ದ ಇಬ್ಬರು ಬಾಲಕಿಯರಿಗೆ ಕಾರಿನಿಂದ ಡಿಕ್ಕಿ ಹೊಡೆದ 17 ವರ್ಷದ ಬಾಲಕ ಕಾರು ಅಪಘಾತವಾಗುತ್ತಿದ್ದಂತೆ ಅಲ್ಲಿಂದ ಪರಾರಿಯಾಗಿದ್ದಾನೆ. ಕಾರಿನಡಿ ಸಿಲುಕಿದ ಬಾಲಕಿಯರು ಸಹಾಯಕ್ಕಾಗಿ ಕಿರುಚಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಕಿರಿದಾದ ರಸ್ತೆಯೊಂದರಲ್ಲಿ ಮನೆಯ ಹೊರಗೆ ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರಿಗೆ ಡಿಕ್ಕಿ ಹೊಡೆದ ಕಾರು ಪಕ್ಕದ ಅಂಗಡಿಯನ್ನು ಕೂಡ ಧ್ವಂಸ ಮಾಡಿದೆ. ಇದರಿಂದ ಕಾರಿನಡಿ ಸಿಲುಕಿ ಆ ಬಾಲಕಿಯರ ಸ್ಥಿತಿ ಚಿಂತಾಜನಕವಾಗಿದೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆʼ ಎಂದು ಬರೆದು ಪೊಸ್ಟ್ ಮಾಡಿದ್ದಾರೆ. ವೈರಲ್ ಆದ ವಿಡಿಯೋವಿನ ಸ್ಕ್ರೀನ್ಶಾಟ್ನ್ನು ನೀವಿಲ್ಲಿ ನೋಡಬಹುದು
ನವಂಬರ್ 01, 2024ರಂದು ʼಹಿಂದೂ ಯುವ ರಾಷ್ಟ್ರ ಸೇನೆʼ ಎಂಬ ಫೇಸ್ಬುಕ್ ಖಾತೆಯಲ್ಲಿ "ಇದೆಲ್ಲ ಈ ಜಿಹಾದಿಗಳ ಪ್ಲಾನ್, ಹಿಂದೂಗಳು , ಮತ್ತು ಹಿಂದೂಗಳ ಸಹೋದರಿಯರು ಮತ್ತು ಹಿಂದೂಗಳ ಹೆಣ್ಣುಮಕ್ಕಳನ್ನು ಕೊಲ್ಲಲಾಗುತ್ತಿದೆ, ಇದು ಅಪಘಾತ ಎಂದು ಹಿಂದೂಗಳು ಭಾವಿಸುತ್ತಿದ್ದಾರೆ. ಈ ವೀಡಿಯೋ ಎಲ್ಲಿಂದ ಬಂದಿದೆಯೋ ಗೊತ್ತಿಲ್ಲ, ಆದರೆ ಹೆಣ್ಣಿನ ಮೇಲೆ ವಾಹನಗಳನ್ನು ಓಡಿಸುವ ಉದ್ದೇಶವೂ ಅದೇ, ಈ ಮುಸ್ಲಿಂ ಯುವಕರು ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದಾರೆ. ಹಿಂದೂಗಳು ಶಾಂತಿಯುತವಾಗಿ ಮೇಣದ ಬತ್ತಿಗಳನ್ನು ಬೆಳಗಿಸುವುದು ಬಿಟ್ಟು ಬೇರೇನೂ ಮಾಡಲ್ಲ ಅಂತ ಅವರಿಗೂ ಗೊತ್ತು" ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ʼಅರುಣ್ ಕುಮಾರ್ ಹಿಂದೂʼ ಎಂಬ ಫೇಸ್ಬುಕ್ ಖಾತೆದಾರ ತನ್ನ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡು ʼಜಿಹಾದಿಗಳ ಪಿತೂರಿ ಅರಿಯದೆ ನಾವು ಮೋಸ ಹೋಗುತ್ತಿದ್ದೇವೆ. ಹಿಂದೂ ಹೆಣ್ಣುಮಕ್ಕಳನ್ನು ಆ್ಯಕ್ಸಿಡೆಂಟ್ ಮೂಲಕ ಕೊಲ್ಲಲಾಗುತ್ತಿದೆ, ಇದು ಅಪಘಾತ ಎಂದು ಹಿಂದೂಗಳು ಭಾವಿಸುತ್ತಿದ್ದಾರೆ. ಎಚ್ಚೆತ್ತು ಕೊಳ್ಳಿ ಹಿಂದೂ ಬಾಂಧವರೆʼ ಎಂದು ಪೊಸ್ಟ್ ಮಾಡಿದ್ದಾರೆ.
ಮತ್ತಷ್ಟು ಸಾಮಾಜಿಕ ಬಳಕೆದಾರರು ತಮ್ಮ ಖಾತೆಗಳಲ್ಲಿ ವಿಡಿಯೋವನ್ನು ಹಂಚಿಕೊಂಡಿರುವುದನ್ನು ನಾವು ಕಾಣಬಹುದು.
ಫ್ಯಾಕ್ಟ್ಚೆಕ್
ವೈರಲ್ ಆದ ಸುದ್ದಿ ಸಾಮಾಜಿಕ ಬಳಕೆದಾರರನ್ನು ತಪ್ಪುದಾರಿಗೆಳೆಯುವ ಪ್ರಯತ್ನ ಮಾಡುತ್ತಿದೆ. ಇಬ್ಬರು ಹುಡುಗಿಯರ ಮೇಲೆ ಕಾರು ಹತ್ತಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಬ್ಬರೂ ಹಿಂದೂಗಳು. ಈ ಘಟನೆಯಲ್ಲಿ ಯಾವುದೇ ಕೋಮು ಕೋನವಿಲ್ಲ.
ನಾವು ವೈರಲ್ ಆದ ವಿಡಿಯೋವಿನಲ್ಲಿರುವ ನಿಜಾಂಶವನ್ನು ತಿಳಿಯಲು ವಿಡಿಯೋವಿನಲ್ಲಿರುವ ಕೆಲವು ಕೀಫ್ರೇಮ್ಗಳನ್ನು ಉಪಯೋಗಿಸಿ ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದೆವು. ಹುಡುಕಾಟದಲ್ಲಿ ನಮಗೆ ಎಬಿಪಿ ನ್ಯೂಸ್, ಎನ್ಬಿಟಿ, ಟಿವಿ9 ಭಾರತ ವರ್ಷ ವೆಬ್ಸೈಟ್ಗಳಲ್ಲಿ ಪ್ರಕಟಿಸಿರುವ ವರದಿಗಳು ನಮಗೆ ಕಂಡುಬಂದವು. ವರದಿಗಳನ್ನು ಪರಿಶೀಲಿಸಿದರೆ, ಕಾರು ಚಲಾಯಿಸುತ್ತಿದ್ದ ವದ್ಯಕ್ತಿಯ ಹೆಸರು ತುಷಾರ್ ಅಗರ್ವಾಲ್ ಎಂದು ಉಲ್ಲೇಖಿಸಿದ್ದರು.
ವರದಿಯಲ್ಲಿ ʼಇಂದೋರ್ನ ಜೈಭವಾನಿ ನಗರದಲ್ಲಿ ಇಬ್ಬರು ಹುಡುಗಿಯರು ನವ್ಯಾ ಪ್ರಜಾಪತ್ ಮತ್ತು ಪ್ರಿಯಾಂಶು ತಮ್ಮ ಮನೆಯ ಮುಂದೆ ರಂಗೋಲಿ ಹಾಕುತ್ತಿರುವಾಗ ವೇಗವಾಗಿ ಬಂದ ಹುಕುಮಚಂದ್ ಕಾಲೋನಿ ನಿವಾಸಿ ʼತುಷಾರ್ ಅಗರ್ವಾಲ್ʼ ಎಂಬ ವ್ಯಕ್ತಿ ಬಾಲಕಿಯರ ಮೇಲೆ ಕಾರು ಚಲಾಯಿಸಿದ್ದಾನೆ. ಕಾರಿನ ಸಂಖ್ಯೆ MP 09 ZW 7287 ಆಗಿದ್ದು, ಇದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆಯ ನಂತರ ಪರಾರಿಯಾಗಿದ್ದ ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಸ್ತುತ ವೆಬ್ಸೈಟ್ನಲ್ಲಿ ʼರಂಗೋಲಿ ಹಾಕುತ್ತಿದ್ದ ಬಾಲಕಿಯರ ಮೇಲೆರಗಿದ ಕಾರು: ಇಬ್ಬರ ಸ್ಥಿತಿ ಗಂಭೀರ!ʼ ಎಂಬ ಹೆಡ್ಲೈನ್ನೊಂದಿಗೆ ವರದಿ ಮಾಡಿರುವುದನ್ನು ನಾವು ಕಾಣಬಹುದು. ವರದಿಯಲ್ಲಿ ʼಇಂದೋರ್ ನಲ್ಲಿ ವೇಗವಾಗಿ ಬಂದ ಕಾರೊಂದು ಮನೆ ಮುಂದೆ ರಂಗೋಲಿ ಹಾಕುತ್ತಿದ್ದ ಇಬ್ಬರು ಬಾಲಕಿಯರ ಮೇಲೆ ಹರಿದಿದೆ. ಕಿರಿದಾದ ರಸ್ತೆಯಲ್ಲಿ ಕಾರು ಚಾಲಕ ವೇಗವಾಗಿ ಕಾರು ಚಲಾಯಿಸುತ್ತಿದ್ದಾಗ ವಾಹನ ನಿಯಂತ್ರಣ ತಪ್ಪಿ ರಸ್ತೆ ಪಕ್ಕ ಮನೆ ಮುಂದೆ ರಂಗೋಲಿ ಹಾಕುತ್ತಿದ್ದ ಇಬ್ಬರು ಬಾಲಕಿಯರ ಮೇಲೆ ಹರಿದಿದೆ. ಕಾರಿನಡಿ ಸಿಲುಕಿದ್ದ ಇಬ್ಬರು ಬಾಲಕಿಯರನ್ನು ಸ್ಥಳೀಯರು ಹೊರಗೆಳೆದಿದ್ದು, ಬಳಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.
ನವ್ಯ ಗೋಯಲ್ ಎಂಬ ಎಕ್ಸ್ ಖಾತೆದಾರ ತನ್ನ ಖಾತೆಯಲ್ಲಿ "In Indore, Madhya Pradesh, a speeding car ran over two girls who were making rangoli outside their home. The driver, reported to be 17 years old, has been apprehended by the police. Meanwhile, both girls are in very serious condition" ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಶೀರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ
ʼಮಧ್ಯಪ್ರದೇಶದ ಇಂದೋರ್ನಲ್ಲಿ ಮನೆಯ ಹೊರಗೆ ರಂಗೋಲಿ ಹಾಕುತ್ತಿದ್ದ ಇಬ್ಬರು ಬಾಲಕಿಯರ ಮೇಲೆ ವೇಗವಾಗಿ ಬಂದ ಕಾರು ಹರಿದಿದೆ. 17 ವರ್ಷ ವಯಸ್ಸಿನ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ವೇಳೆ ಇಬ್ಬರು ಬಾಲಕಿಯರ ಸ್ಥಿತಿ ಗಂಭೀರವಾಗಿದೆʼ ಎಂದು ಬರೆದು ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ.
ಎಎಸ್ಐ ತನ್ನ ಎಕ್ಸ್ ಖಾತೆಯಲ್ಲಿ ಈ ಘಟನೆಯ ಕುರಿತು ಇಂದೋರ್ ವಲಯ-1 ಡಿಸಿಪಿ ವಿನೋದ್ ಕುಮಾರ್ ಮೀನಾ ಅವರ ಹೇಳಿಕೆಯನ್ನು ಹಂಚಿಕೊಂಡಿದ್ದರು. ಇದರಲ್ಲಿ ಅವರು ಆರೋಪಿಯನ್ನು ತುಷಾರ್ ಅಗರ್ವಾಲ್ ಎಂದು ಹೇಳಲಾಗಿದೆ. ಇಂದೋರ್ ಕಾರು ಅಪಘಾತದಲ್ಲಿ ಯಾವುದೇ ಕೋಮು ಕೋನವಿಲ್ಲ ಕಾರು ಚಲಾಯಿಸಿದ ವ್ಯಕ್ತಿ ಹಿಂದೂ ಎಂದು ಹೇಳಿರುವ ವಿಡಿಯೋ ಕ್ಲಿಪ್ಪಿಂಗನ್ನು ನಾವು ನೋಡಬಹುದು.
ಇದರಿಂದ ಸಾಭೀತಾಗಿದ್ದೇನೆಂದರೆ, ವೈರಲ್ ಆದ ಸುದ್ದಿ ಸಾಮಾಜಿಕ ಬಳಕೆದಾರರನ್ನು ತಪ್ಪದಾರಿಗೆಳೆಯುತ್ತಿದೆ. ಕಾರು ಚಲಾಯಿಸುತ್ತಿದ್ದ ವ್ಯಕ್ತಿ ತುಷಾರ್ ಅಗರ್ವಾಲ್ ಆತ ಹಿಂದೂ. ಆದರೆ ಕೆಲವು ಸಾಮಾಜಿಕ ಬಳಕೆದಾರರು ಕೋಮು ಬಣ್ಣವನ್ನು ಬಳೆದು ಹಚಿಕೊಳ್ಳುತ್ತಿದ್ದಾರೆ